1 Corinthians 8

ವಿಗ್ರಹಕ್ಕೆ ಅರ್ಪಿಸಿದ ಆಹಾರವನ್ನು ಕುರಿತು ಬೋಧನೆ

1
8:1 1 ಕೊರಿ. 8:4,7,10
ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. <<ನಮ್ಮೆಲ್ಲರಿಗೆ ಜ್ಞಾನವುಂಟೆಂದು>> ನಾವು ಬಲ್ಲೆವು. ತಿಳುವಳಿಕೆಯು ಉಬ್ಬಿಸುತ್ತದೆ, ಆದರೆ
8:1 1 ಕೊರಿ. 13:4-13
ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.
2ಒಬ್ಬನು ತಾನು
8:2 ಗಲಾ. 6:3; 1 ಕೊರಿ. 3:18
ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ
8:2 1 ಕೊರಿ. 13:8-12
ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.
3ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.

4ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ,
8:4 1 ಕೊರಿ. 10:19; ಯೆಶಾ. 41:24
<<ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು>> ನಮಗೆ ತಿಳಿದಿದೆ ಮತ್ತು
8:4 1 ಕೊರಿ. 8:6; ಧರ್ಮೋ. 4:35,39; 6:4
<<ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ>> ಬಲ್ಲೆವು.
5ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, <<ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು>> ಬಹಳವಿದ್ದರೂ, 6
8:6 1 ಕೊರಿ. 8:4; ಎಫೆ. 4:6
<<ನಮಗಾದರೋ ಒಬ್ಬನೇ ತಂದೆಯಾದ ದೇವರು;
8:6 ರೋಮಾ. 11:36
ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ,
8:6 ಎಫೆ. 4:5
ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು.
8:6 ಯೋಹಾ. 1:3
ನಾವೂ ಆತನ ಮುಖಾಂತರ ಉಂಟಾದೆವು.>>

7ಆದಾಗ್ಯೂ, ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ,
8:7 ರೋಮಾ. 14:14,22,23
ಕೆಲವರು ಈ ವರೆಗೂ ವಿಗ್ರಹಾಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.

8ಆದರೆ ನಾವು ತಿನ್ನುವ
8:8 ರೋಮಾ. 14:17
ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
9
8:9 1 ಕೊರಿ. 10:23; ರೋಮಾ. 14:21; ಗಲಾ. 5:13
ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
10ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.

11ಹೀಗೆ ಈ ನಿನ್ನ ಜ್ಞಾನದಿಂದ
8:11 ರೋಮಾ. 14:15,20
ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
12ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ
8:12 ಮತ್ತಾ 18:6
ಅವರ ದುರ್ಬಲವಾದ ಮನಸಾಕ್ಷಿಯನ್ನು ನೋಯಿಸಿದರೆ ನೀವು
8:12 ಮತ್ತಾ 25:45
ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.
8:13 ರೋಮಾ. 4:13,21
ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ.

13

Copyright information for KanULB