Galatians 1

ವಂದನೆಯೂ ದೇವರ ಸ್ತೋತ್ರವೂ

1
1:1 ಗಲಾ. 1:11,12
ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ
1:1 ಅ. ಕೃ. 9:6; 20:24; 22:10,15,21; 26:16; 1 ತಿಮೊ. 1:1
ಯೇಸು ಕ್ರಿಸ್ತನ ಮುಖಾಂತರವೂ ಮತ್ತು
1:1 ಅ. ಕೃ. 2:24
ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ
1:2 ಅ. ಕೃ. 14:21; 16:6; 1 ಕೊರಿ. 16:1
ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ,

3
1:3 1 ತಿಮೊ. 1:2
ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ
1:3 ರೋಮಾ. 1:7; ಕೊರಿ. 1:3
ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

4ಆತನು ನಮ್ಮನ್ನು
1:4 ಎಫೆ. 2:2; 1 ಯೋಹಾ 5:19
ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ,
1:4 ಮತ್ತಾ 20:28; ರೋಮಾ. 4:25; 1 ಕೊರಿ. 15:3
ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.
5ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.

ಏಕೈಕ ಸುವಾರ್ತೆ

6ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ
1:6 2 ಕೊರಿ. 11:4; 1 ತಿಮೊ. 1:3
ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.
7
1:7 ಅ. ಕೃ. 4:12; 1 ಕೊರಿ. 3:11
ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು
1:7 ಗಲಾ. 5:10
ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.

8ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ
1:8 2 ಕೊರಿ. 11:14
ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು
1:8 ರೋಮಾ. 9:3
ಶಾಪಗ್ರಸ್ತನಾಗಲಿ.
9ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ
1:9 ರೋಮಾ. 9:3
ಅವನು ಶಾಪಗ್ರಸ್ತನಾಗುವನು.

10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ?
1:10 1 ಥೆಸ. 2:4
ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

ಪೌಲನು ಅಪೊಸ್ತಲನಾದ್ದದು ಹೇಗೆ

11ಸಹೋದರರೇ,
1:11 1 ಕೊರಿ. 15:1-3
ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.
12
1:12 ಗಲಾ. 1:1; 1 ಕೊರಿ. 11:3; 15:3
ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ
1:12 ಗಲಾ. 1:16; 1 ಕೊರಿ. 2:10; 2 ಕೊರಿ. 12:1
ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.

13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ
1:13 ಅ. ಕೃ. 26:4
ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ.
1:13 ಅ. ಕೃ. 8:3
ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
14ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ
1:14 ಫಿಲಿ. 3:6
ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.

15ಆದರೆ
1:15 ಯೆಶಾ. 49:1,; ಯೆರೆ. 1:5
ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ
1:15 ಅ. ಕೃ. 13:2; ಮಾರ್ಕ 6:3; ರೋಮಾ. 1:1
ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,
16ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು
1:16 ಗಲಾ. 2:9; ಅ. ಕೃ. 9:15
ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿ ಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
17ಯೆರೂಸಲೇಮಿಗೆ ನನಗಿಂತ ಮೊದಲು ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ ಅರಬಸ್ಥಾನಕ್ಕೆ ಹೋಗಿ ತಿರುಗಿ ದಮಸ್ಕಕ್ಕೆ ಬಂದೆನು.

18
1:18 ಅ. ಕೃ. 9:22-27; 22:17
ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.
19ಆದರೆ
1:19 ಮತ್ತಾ 12:46; ಮಾರ್ಕ 6:3; ಅ. ಕೃ. 12:17
ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
20ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ.

21
1:21 ಅ. ಕೃ. 9:30; 11:25, 26; 13:1
ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.
22ಆದರೆ ಕ್ರಿಸ್ತನಲ್ಲಿರುವ
1:22 1 ಥೆಸ. 2:14
ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.
23<<ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ>> ಎಂಬ ಸುದ್ದಿಯನ್ನು ಅವರು ಕೇಳಿ, ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.

24

Copyright information for KanULB