Revelation of John 13

ಎರಡು ಮೃಗಗಳು

1
13:1 ದಾನಿ. 7:2-8:
ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು.
13:1 ಪ್ರಕ. 12:3:
ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ
13:1 ಪ್ರಕ. 17:3:
ದೇವದೂಷಣೆಯ ನಾಮಗಳೂ ಇದ್ದವು.
2ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು.
13:2 ಪ್ರಕ. 13:4, 11; ಲೂಕ. 4:6:
ಅದಕ್ಕೆ ಘಟಸರ್ಪನು ಶಕ್ತಿಯನ್ನೂ,
13:2 ಪ್ರಕ. 16:10:
ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.

3ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು,
13:3 ಪ್ರಕ. 17:8:
ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.
4ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ,
13:4 ಪ್ರಕ. 18:18:
<<ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?>> ಎಂದರು.

5
13:5 ದಾನಿ. 7:8, 11, 20; 11:36; 2 ಥೆಸ. 2:4:
ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು
13:5 ಪ್ರಕ. 11:2; 12:6:
ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
6ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.

7
13:7 ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ.
ಇದಲ್ಲದೆ ದೇವಜನರ ಮೇಲೆ
13:7 ದಾನಿ. 7:21; ಪ್ರಕ. 11:7; 12:17:
ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
8
13:8 ಅ. ಕೃ. 2:23; 1 ಪೇತ್ರ. 1:19, 20:
ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ
13:8 ಪ್ರಕ. 3:5:
ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ
13:8 ಪ್ರಕ. 3:10:
ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

9
13:9 ಪ್ರಕ. 2:7:
ಕಿವಿಯುಳ್ಳವನು ಕೇಳಲಿ,
10
13:10 ಯೆಶಾ. 33:1; ಯೆರೆ. 15:2; 43:11:
ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು,
13:10 ಆದಿ. 9:6; ಮತ್ತಾ 26:52:
ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು.
13:10 ಪ್ರಕ. 14:12:
ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.

11
13:11 ಅಂದರೆ, ಸುಳ್ಳುಪ್ರವಾದಿ; ಪ್ರಕ. 13:1, 14; 16:13; 19:20:
ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ
13:11 ಮೂಲ. ಕುರಿಮರಿಗಿರುವಂತೆ.
ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
12ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ
13:12 ವ. 9:
ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.

13ಇದು ಜನರ ಮುಂದೆ
13:13 ಪ್ರಕ. 20:9; 1 ಅರಸು. 18:38; 2 ಅರಸು. 1:10, 12; ಲೂಕ. 9:54:
ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,
14ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು
13:14 ಪ್ರಕ. 12:9:
ಮರಳುಗೊಳಿಸಿತ್ತು. ಅವರಿಗೆ,
13:14 ಪ್ರಕ. 13:3, 12:
ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.

15ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ,
13:15 ಪ್ರಕ. 14:9, 11; 16:2; 19:20; 20:4:
ತನ್ನನ್ನು ಆರಾಧಿಸದವರೆಲ್ಲರಿಗೂ
13:15 ಪ್ರಕ. 16:6:
ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
16ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ
13:16 ಪ್ರಕ. 7:3; ಗಲಾ. 6:17:
ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
17ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ
13:17 ಪ್ರಕ. 14:11:
ಮೊದಲನೆಯ ಮೃಗದ ಹೆಸರು ಅಥವಾ
13:17 ಪ್ರಕ. 15:2:
ಅದರ ಹೆಸರನ್ನು ಸೂಚಿಸುವ ಸಂಖ್ಯೆ.

13:18 ಪ್ರಕ. 17, 9:
ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.

18

Copyright information for KanULB