Psalms 100
ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ
ಕೃತಜ್ಞತಾಯಜ್ಞ ಕೀರ್ತನೆ.
(ಕೀರ್ತ. 95)
1ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ;
ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ;
ನಾವು ಆತನವರು, ಆತನ ಪ್ರಜೆಯೂ,
ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.
5 ಯೆಹೋವನು ಒಳ್ಳೆಯವನು;
ಆತನ ಕೃಪೆಯು ಯುಗಯುಗಕ್ಕೂ,
ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
Copyright information for
KanULB