Psalms 113
ಯೆಹೋವನನ್ನು ಸ್ತುತಿಸುವುದು
1ಯೆಹೋವನಿಗೆ ಸ್ತೋತ್ರ!ಯೆಹೋವನ ಸೇವಕರೇ, ಸ್ತೋತ್ರಮಾಡಿರಿ;
ಯೆಹೋವನ ನಾಮವನ್ನು ಸ್ತುತಿಸಿರಿ.
2 ಈಗಿನಿಂದ ಯುಗಯುಗಕ್ಕೂ,
ಯೆಹೋವನ ನಾಮವು ಕೀರ್ತಿಸಲ್ಪಡಲಿ.
3 ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.
4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು;
ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.
5 ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,
6 ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.
7 ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
8 ಪ್ರಭುಗಳ ಜೊತೆಯಲ್ಲಿ,
ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
9 ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ.
ಯೆಹೋವನಿಗೆ ಸ್ತೋತ್ರ!
Copyright information for
KanULB