Psalms 131
ಭಕ್ತರ ದೀನಭಾವ
ಯಾತ್ರಾಗೀತೆ; ದಾವೀದನದು.
(ಜ್ಞಾನೋ. 23:26; ಮತ್ತಾ. 18:3)
1ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ;ನನಗೆ ಸೊಕ್ಕಿನ ಕಣ್ಣುಗಳಿಲ್ಲ;
ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
2 ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ,
ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
3 ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ
ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.
Copyright information for
KanULB