Psalms 137
ಸೆರೆಯವರ ಪ್ರಲಾಪ
(2 ಪೂರ್ವ. 36)
1ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು,ಚೀಯೋನನ್ನು ನೆನಪುಮಾಡಿಕೊಂಡು ಅತ್ತೆವು.
2 ಆ ದೇಶದ ನೀರವಂಜಿ ಮರಗಳಿಗೆ ನಮ್ಮ ಕಿನ್ನರಿಗಳನ್ನು ತೂಗುಹಾಕಿದೆವು.
3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, <<ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ>> ಎಂದು ಹೇಳುತ್ತಿದ್ದರು.
4 ನಾವು ಪರದೇಶದಲ್ಲಿ ಯೆಹೋವನ ಗೀತೆಗಳನ್ನು ಹಾಡುವುದು ಹೇಗೆ?
5 ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.
6 ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ,
ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ,
ನನ್ನ ನಾಲಿಗೆಯು ಬತ್ತಿಹೋಗಲಿ.
7 ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ.
ಅವರು, <<ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ>> ಎಂದು ಹೇಳಿದರಲ್ಲಾ.
8 ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.
9 ನಿನ್ನ ಮಕ್ಕಳನ್ನು ಹಿಡಿದು ಬಂಡೆಗೆ ಅಪ್ಪಳಿಸುವವನು ಭಾಗ್ಯಹೊಂದಲಿ.
Copyright information for
KanULB