‏ Psalms 77

ದೇವರ ಮಹತ್ಕಾರ್ಯಗಳ ಧ್ಯಾನ

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ.

1ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು;
ಆತನು ನನಗೆ ಕಿವಿಗೊಡುವನು.

2

ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು;

ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು.
ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
3 ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು;
ಮನಗುಂದಿದವನಾಗಿಯೇ ಹಂಬಲಿಸುವೆನು.


4

ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ.

ತಳಮಳಗೊಂಡು ಮಾತನಾಡಲಾರದೆ ಇದ್ದೆನು.
5 ಹಳೆಯ ದಿನಗಳನ್ನೂ,
ಪುರಾತನ ವರುಷಗಳನ್ನೂ ಜ್ಞಾಪಕಮಾಡಿಕೊಂಡೆನು.

6

ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು,

ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು
ನನ್ನ ಮನಸ್ಸಿನಲ್ಲಿ,
7 <<ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ?
ಆತನು ಪುನಃ ಪ್ರಸನ್ನನಾಗುವುದಿಲ್ಲವೋ?

8

ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ?

ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
9 ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ?
ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?>> ಎಂದು ಅಂದುಕೊಂಡೆನು
ಸೆಲಾ


10

ಪುನಃ ನಾನು,

<<ಹೀಗೆ ನೆನಸುವುದು ನನ್ನ ಬಲಹೀನತೆಯೇ.
ಪರಾತ್ಪರನ ಭುಜಬಲವು ಪ್ರಕಟವಾದ ವರುಷಗಳನ್ನು ಜ್ಞಾಪಿಸಿಕೊಳ್ಳುವೆನು.

11

ಯೆಹೋವನ ಕೃತ್ಯಗಳನ್ನು ವರ್ಣಿಸುವೆನು;

ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
12 ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು;
ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು>> ಅಂದುಕೊಂಡೆನು.

13

ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು.

ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
14 ಅದ್ಭುತಗಳನ್ನು ನಡೆಸುವ ದೇವರು ನೀನೇ;
ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
15 ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು,
ಭುಜಬಲದಿಂದ ಬಿಡುಗಡೆಮಾಡಿದಿ.
ಸೆಲಾ


16

ದೇವರೇ, ಜಲರಾಶಿಗಳು ನಿನ್ನನ್ನು ಕಂಡವು;

ಕಾಣುತ್ತಲೇ ತಳಮಳಗೊಂಡು ತಳದ ವರೆಗೂ ಅಲ್ಲಕಲ್ಲೋಲವಾದವು.
17 ಮೇಘಮಂಡಲವು ಮಳೆಗರೆಯಿತು;
ಆಕಾಶವು ಗರ್ಜಿಸಿತು;
ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.

18

ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು;

ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು;
ಭೂಮಿಯು ಅಲ್ಲಾಡಿ ಕಂಪಿಸಿತು.
19 ನೀನು ಸಮುದ್ರದಲ್ಲಿ ಮಾರ್ಗಮಾಡಿದಿ;
ಮಹಾಜಲರಾಶಿಗಳನ್ನು ದಾಟಿದಿ;
ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
20 ಕುರುಬನು ಕುರಿಹಿಂಡನ್ನು ಹೇಗೋ,
ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ,
ನಿನ್ನ ಪ್ರಜೆಯನ್ನು ಮುನ್ನಡೆಸಿದಿ.

Copyright information for KanULB