Psalms 82
ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು
ಆಸಾಫನ ಕೀರ್ತನೆ.
(ಕೀರ್ತ. 58)
1ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,ಇತರ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ.
2<<ನೀವು ಅನ್ಯಾಯವಾಗಿ ತೀರ್ಪುಕೊಡುವುದೂ,
ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ?
ಸೆಲಾ.
3ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
4ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.>>
5ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
6<<ನೀವು ದೇವರುಗಳು, ಎಲ್ಲರೂ ಪರಾತ್ಪರನ ಮಕ್ಕಳು, 7ಆದರೂ ನರರಂತೆ ಸತ್ತೇ ಹೋಗುವಿರಿ,
ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ>>
ಎಂದು ನಾನು ಹೇಳಿದೆನು.
ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?
8
Copyright information for
KanULB